Site icon Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಬಿಜೆಪಿ ಮಂಡಲ ಎಸ್‌ಸಿ ಮೋರ್ಚಾ ಕಾರ್ಯಕಾರಿಣಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಎಸ್‌ಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.

ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಬೈಂದೂರು ಕ್ಷೇತ್ರದಲ್ಲಿ ಎಸ್ ಸಿ ಮೋರ್ಚಾ ಬಲಿಷ್ಠವಾಗುತ್ತದೆ ಇನ್ನು ಬಲಿಷ್ಠವಾಗಿ ನಾವೆಲ್ಲರೂ ಸೇರಿ ಪಕ್ಷವನ್ನು ಬೆಳೆಸೋಣ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಸಿ ಮೋರ್ಚಾದ ಅಧ್ಯಕ್ಷರಾದ ಚಂದ್ರ ಪಂಚವಟಿ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸುರೇಶ್ ನಾಯಕ್ ಕುಯಿಲಾಡಿ, ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಉಪಾಧ್ಯಕ್ಷರಾದ ಆನಂದ್ ಖಾರ್ವಿ, ಎಸ್‌ಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಗೋಪಾಲ ಕಳಂಜೆ, ಉಪಾಧ್ಯಕ್ಷರಾದ ನಾರಾಯಣ ಗುಜ್ಜಾಡಿ, ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಸದಾನಂದ ಕೈಪುಂಜಾಲು, ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version