Site icon Kundapra.com ಕುಂದಾಪ್ರ ಡಾಟ್ ಕಾಂ

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ರೇಬೀಸ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಬೈಂದೂರು, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಡುಪಿ, ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬೀಸ್ ಮಾಹಿತಿ ಶಿಬಿರ ಹಮ್ಮಿಕೊಳ್ಳಲಾಯಿತು.

ಬೈಂದೂರು ಪಶುವೈದ್ಯ ಸೇವಾ ಇಲಾಖೆಯ ಸಹಾಯಕ ನಿರ್ದೆಶಕರಾದ ಡಾ. ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ರೇಬೀಸ್ ಮಾರಕ ರೋಗದ ಕುರಿತು ಮನೋಜ್ಞವಾಗಿ ಮಾಹಿತಿ ನೀಡಿ ವಿದ್ಯಾರ್ಥಿಗಳೊಂದಿಗೆ ಪ್ರಶ್ನಾವಳಿಗಳಲ್ಲಿ ಪಾಲ್ಗೊಂಡರು.

ಈ ಸಂದರ್ಭ ಮಾಹಿತಿ ಶಿಬಿರದಲ್ಲಿ ಮ್ಯಾಕೋಡ್ ಕೆ. ಎಮ್. ಎಪ್ ಡೈರಿ ಕಾರ್ಯದರ್ಶಿ ಕುಶಾಲ ಗಾಣಿಗ, ಹಿರಿಯ ಪಶು ಪರೀಕ್ಷಾಧಿಕಾರಿ ಪ್ರಶಾಂತ್ ಕುಲಕರ್ಣಿ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಆರ್.ಕೆ ಬಿಲ್ಲವ ಹಾಗೂ ಶಾಲಾಭಿವೃದ್ದಿ ಸಮಿತಿ ಸದಸ್ಯ ರಾಜೀವ ಶೆಟ್ಟಿ, ಮುಖ್ಯ ಶಿಕ್ಷಕ ರವೀದಾಸ್ ಶೆಟ್ಟಿ, ಶಿಕ್ಷಕ ರಾಜಾರಾಮ ಭಟ್ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕಿ ರೋಸಮ್ಮ ಕಾರ್ಯಕ್ರಮ ನಿರ್ವಹಿಸಿ ಎಲ್ಲರನ್ನು ಸ್ವಾಗತಿಸಿದರು ಶಿಕ್ಷಕ ರಾಘವೇಂದ್ರ ವಂದಿಸಿದರು.

Exit mobile version