Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ‘ವಿದ್ಯಾಸೇತು’ ಪುಸ್ತಕ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ವಿದ್ಯಾಗಮ ಹಾಗೂ ಕರ್ನಾಟಕದ ನಾಲ್ಕು ರೋಟರಿ ಜಿಲ್ಲೆಗಳ ಪ್ರಯೋಜಕತ್ವದ ಗಂಗೊಳ್ಳಿ ರೋಟರಿ ಕ್ಲಬ್ ಆಶ್ರಯದಲ್ಲಿ ಮಹತ್ವಾಕಾಂಕ್ಷಿಯ ಕನ್ನಡ ಮಾಧ್ಯಮದಲ್ಲಿ ಎಸ್.ಎಸ್. ಎಲ್.ಸಿ ಓದುತ್ತಿರುವ ವಿದ್ಯಾರ್ಥಿಗಳ ಪ್ರೋತ್ಸಾಹಕ “ವಿದ್ಯಾಸೇತು” ಪುಸ್ತಕಗಳ ವಿತರಣಾ ಕಾರ್ಯಕ್ರಮ ನಾಡ ಗುಡ್ಡೆಯಂಗಡಿಯ ಗ್ರೆಗರಿ ಪ್ರೌಢಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಅಧ್ಯಕ್ಷ ರಾಜೇಶ್ ಎಂ. ಜಿ. ಅವರು ವಿದ್ಯಾರ್ಥಿಗಳಿಗೆ ವಿದ್ಯಾಸೇತು ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ಶಾಲೆಯ ಮುಖ್ಯೋಪಾಧ್ಯಾಯ ಸೀತಾರಾಮ್ ಶೆಟ್ಟಿ ರೋಟರಿಯ ಸಾಮಾಜಿಕ ಕಳಕಳಿಯನ್ನು ಪ್ರಶಂಸಿಸಿ, ಕೊಡುಗೆಯ ಸದುಪಯೋಗ ಮಾಡಿಕೊಂಡು ಉತ್ತಮ ಅಂಕ ಗಳಿಸಿ ಶಾಲೆಗೂ, ಊರಿಗೂ ಕೀರ್ತಿ ತಂದು ರೋಟರಿಯ ಪ್ರಯತ್ನವನ್ನು ಸಾರ್ಥಕ ಗೊಳಿಸುವಂತೆ ವಿನಂತಿಸಿದರು. ಶಿಕ್ಷಕ ಸುದೇಶ್ ಶೆಟ್ಟಿ ಶುಭಾಶಂಸನೆಗೈದರು.

ಶಿಕ್ಷಕ ಭುಜಂಗ ಗಾಣಿಗ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಹ ಶಿಕ್ಷಕ ಸುಬ್ರಹ್ಮಣ್ಯ ಎನ್. ವಂದಿಸಿದರು.

Exit mobile version