Site icon Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಸಹಾಯಧನ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಕೋಡಿ ಬ್ಯಾರೀಸ್ ಬ್ಯಾರೀಸ್ ಶಿಕ್ಷ ಮತ್ತು ಸುರಕ್ಷಾ ಫೌಂಡೇಶನ್‌ನಿಂದ ಮಹಾತ್ಮ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಬ್ಯಾರೀಸ್ ಸಂಸ್ಥೆಗಳ ಸಿಬ್ಬಂದಿಯ ಮಕ್ಕಳ ವಿದ್ಯಾಭಾಸಕ್ಕಾಗಿ ಪ್ರತಿ ವರ್ಷ ಕೊಡಮಾಡುವ ಸಹಾಯ ಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾರೀಸ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ದೋಮ ಚಂದ್ರಶೇಖರ್ ಅವರು “ಗಾಂಧಿ ಜಯಂತಿ ಆಚರಣೆಯ ಸಂಧರ್ಭದಲ್ಲಿ ನಡೆದ ಈ ಸಹಾಯ ಧನ ವಿತರಣೆ ಬಹಳ ಔಚಿತ್ಯಪೂರ್ಣವಾದುದು ಎಂದು ಹೇಳುತ್ತಾ ಗಾಂಧೀಜಿಯವರ ಶಿಕ್ಷಣದ ಕಲ್ಪನೆಯ ಕುರಿತು ಮಾತನಾಡಿದರು. ಧೀಮಂತ ನಾಯಕ ಲಾಲ್ ಬಹುದ್ದೂರ್ ಶಾಸ್ತ್ರೀ ಯವರನ್ನು ನೆನಪಿಸಿಕೊಳ್ಳುತ್ತಾ, ಇಂತಹ ಅಪೂರ್ವ ಮಹಾನ್ ವ್ಯಕ್ತಿಗಳ ಚರಿತ್ರೆ ಓದುವ ಹವ್ಯಾಸವನ್ನು ಬೆಳೆಯಿಸಿಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ ಅಬ್ದುಲ್ ರೆಹಮಾನ್ ಸಹಾಯ ಧನವನ್ನು ವಿತರಿಸಿ ಗಾಂಧೀಜಿ ಮತ್ತು ಇತರ ನಾಯಕರ ಹೋರಾಟದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಿತಿದೆ. ನಾವೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿ ನಮ್ಮ ದೇಶವನ್ನು ಕಟ್ಟೋಣ ಎಂದು ಹೇಳಿದರು.

ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಸಿದ್ದಪ್ಪ ಕೆ ಎಸ್, ಪ್ರಾಸ್ತಾವಿಕ ಮಾತುಗಳನ್ನಾಡಿ , ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಣೆ ಮಾಡಿದರು.

Exit mobile version