Site icon Kundapra.com ಕುಂದಾಪ್ರ ಡಾಟ್ ಕಾಂ

ಬೀಜಾಡಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಹಳೆಅಳಿವೆಯಿಂದ ಕೋಟೇಶ್ವರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶನಿವಾರ ಸಂಜೆ ಕಿನಾರಾ ಬೀಚ್ ರೋಡಿನ ಪೋಸ್ಟ್ ಆಫೀಸ್ ಬಳಿ ನಡೆದಿದೆ. ಬೀಜಾಡಿ ಗ್ರಾಮದ ನಿವಾಸಿ ಬೈಕ್ ಸವಾರ ವಿಜಯೇಂದ್ರ ಪೂಜಾರಿ ಮೃತ ದುರ್ದೈವಿ.

ಫೈನಾನ್ಸ್ ವ್ಯವಹಾರ ಮಾಡಿಕೊಂಡಿದ್ದ ವಿಜಯೇಂದ್ರ ಅವರು ಮಧ್ಯಾಹ್ನ ಮನೆಗೆ ಬಂದಿದ್ದು ಸಂಜೆ ಮರಳಿ ಕಛೇರಿಗೆ ತೆರಳುವ ಸಂದರ್ಭ ಈ ಘಟನೆ ನಡೆದಿದೆ. ಕುಟುಂಬದಲ್ಲಿ ಹಿರಿಯ ಮಗನಾಗಿದ್ದ ವಿಜಯೇಂದ್ರ ಅವರು ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದರು. ಮಡದಿ ೭ ತಿಂಗಳ ಗರ್ಭಿಣಿಯಾಗಿದ್ದಾರೆ. ಮೃತರು ತಂದೆ ತಾಯಿ, ಪತ್ನಿ, ಇಬ್ಬರು ಸಹೋದರರು ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Exit mobile version