Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗಾಂಧಿ ಓದು ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಸಾರ್ವಜನಿಕ ಶಿಕ್ಷಣ ಇಲಾಖೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ಸಹಯೋಗದಲ್ಲಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಗಾಂಧಿ ಓದು ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಮುದಾಯ ಕುಂದಾಪುರದ ಅಧ್ಯಕ್ಷ ಉದಯ ಗಾಂವಕಾರ ಕಾರ್ಯಕ್ರಮದ ರೂಪುರೇಷೆಗಳನ್ನು ವಿವರಿಸಿದರು. ಪ್ರತಿ ಶಾಲೆಯ ವಾಚನಾಲಯಕ್ಕೂ ಗಾಂಧೀಜಿಯವರ ಆತ್ಮಚರಿತ್ರೆಯ ಪುಸ್ತಕಗಳನ್ನು ನೀಡಲಾಯಿತು.

ಈ ಸಂದರ್ಭ ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ಸದಾನಂದ ಬೈಂದೂರು, ಹಿರಿಯ ರಂಗಕರ್ಮಿ ಜಿ.ವಿ ಕಾರಂತ ಉಪಸ್ಥಿತರಿದ್ದರು.

ಶಿಕ್ಷಕ ಬಾಬು ಶೆಟ್ಟಿ ಗಾಂಧಿ ಓದಿನ ಪ್ರಸ್ತುತೆಯನ್ನು ವಿವರಿಸಿದರು. ರವೀಂದ್ರ ಸ್ವಾಗತಿಸಿದರು, ರವಿ ಕಟ್ಕೆರೆ ನಿರೂಪಿಸಿದರು, ವಾಸುದೇವ ಗಂಗೇರ ವಂದಿಸಿದರು.

Exit mobile version