Kundapra.com ಕುಂದಾಪ್ರ ಡಾಟ್ ಕಾಂ

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾ ವ್ಯಾಪ್ತಿಯೊಳಗಿನ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಸಂಸ್ಥೆಯು ಸಕ್ಷಮ ನೋಂದಾಣಾಧಿಕಾರಿಗಳಲ್ಲಿ ನೋಂದಣಿ ಹೊಂದಿರಬೇಕು ಮತ್ತು ಕನಿಷ್ಟ 3ವರ್ಷಗಳ ಅವಧಿಯಾಗಿರಬೇಕು. ಕಾಲಕಾಲಕ್ಕೆ ನವೀಕರಿಸಿದ ಪ್ರಮಾಣ ಪತ್ರ ಹೊಂದಿರಬೇಕು ಹಾಗೂ ಈ ಹಿಂದೆ ಇಂತಹ ಯಾವುದಾದರೂ ಸಮೀಕ್ಷೆ ನಡೆಸಿದ ಅನುಭವ ಹೊಂದಿದ್ದು, ಅನುಭವ ಪ್ರಮಾಣ ಪತ್ರ ಲಗತ್ತಿಸಿರಬೇಕು.

ಸಲ್ಲಿಸಲು ಅಕ್ಟೋಬರ್ 8 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ ಹಾಗೂ ದೂ ಸಂ: 0820-2574977 ಅಥವಾ 8553141512ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Exit mobile version