Site icon Kundapra.com ಕುಂದಾಪ್ರ ಡಾಟ್ ಕಾಂ

ನಾವುಂದ ಗ್ರಾಪಂ: ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಸರ್ಕಾರ ಯಾವುದೇ ಕೆಲಸಕ್ಕೆ ನಿರ್ಬಂಧನೆ ಮಾಡಿದ್ದು, ನಿರ್ಬಂಧನೆ ಮೀರಿ ಕೆಲವು ಅಧಿಕಾರಿಗಳು ಕೆಲವೊಂದು ರಾಜಕೀಯ ಒತ್ತಡಕ್ಕೆ ಮಣಿದು ಹಣವನ್ನು ತೆಗೆದುಕೊಳ್ಳುತ್ತಿರುವುದಲ್ಲದೆ ಸಾರ್ವಜನಿಕರಿಗೆ ಕೆಲಸವನ್ನು ಮಾಡಿಕೊಡಲು ಕಚೇರಿಗೆ ಅಲೆದಾಡಿಸುತ್ತಾರೆ. ಈ ವ್ಯವಸ್ಥೆಯನ್ನು ಮಹಿಳೆಯರು ತಮ್ಮ ಒಕ್ಕೂಟದ ಮೂಲಕ ಖಂಡಿಸಬೇಕು. ಎಲ್ಲರೂ ಕಾನೂನನ್ನು ಗೌರವಿಸಬೇಕಿದೆ. ಸರಕಾರದ ಸೌಲಭ್ಯ ಪಡೆಯಲು ಮೊಬೈಲ್ ಮೂಲಕ ಅಂತರ್ಜಾಲದಲ್ಲಿರುವ ಎಲ್ಲ ಮಾಹಿತಿಯನ್ನು ಪಡೆದುಕೊಳ್ಳಬೇಕು. ಅವರವರ ಕೆಲಸವನ್ನು ಅವರೇ ಮಾಡಿಕೊಂಡರೆ ದಲ್ಲಾಳಿಗಳ ಕಾಟವನ್ನು ತಪ್ಪಿಸಿಬಹುದು ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಬಿ.ಎಸ್. ಹೇಳಿದರು.

ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ರೋಟರಿ ಕ್ಲಬ್ ಗಂಗೊಳ್ಳಿ, ಯುವ ಸ್ಪಂದನ ಕೇಂದ್ರ ಉಡುಪಿ, ಸಂಗಮ ಸಂಜೀವಿನಿ ಸ್ವಸಹಾಯ ಸಂಘ ಒಕ್ಕೂಟ, ನಾವುಂದ ಗ್ರಾಮ ಪಂಚಾಯತ್ ಇವರ ಆಶ್ರಯದಲ್ಲಿ ನಾವುಂದಲ್ಲಿ ನಡೆದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ.ಜಿ. ಶುಭ ಯುವಸ್ಪಂದನ ಕೇಂದ್ರದ ನರಸಿಂಹ ಗಾಣಿಗ, ಸಂಪನ್ಮೂಲ ವ್ಯಕ್ತಿ ಸುನೀತಾ, ಹರ್ಷಿತ, ಶಾಂತ ಮತ್ತು ಪ್ರೇಮ್, ಸುವರ್ಣ ಮತ್ತಿತರು ಉಪಸ್ಥಿತರಿದ್ದರು. ಒಕ್ಕೂಟದ ಕಸ್ತೂರಿ ಸ್ವಾಗತಿಸಿದರು. ಜಾಂಬವತಿ ಕಾರ್ಯಕ್ರಮ ನಿರೂಪಿಸಿದರು. ರತ್ನ ವಂದಿಸಿದರು.

Exit mobile version