Site icon Kundapra.com ಕುಂದಾಪ್ರ ಡಾಟ್ ಕಾಂ

ಸ್ವಾತಂತ್ರ್ಯದ ಅಮೃತ ಮಹೋತ್ಸವ: ನಿವೃತ್ತ ಯೋಧ ಗಣಪತಿ ಗೌಡ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಪಾಲುಗೊಂಡ ನಿವೃತ್ತ ಯೋಧ ಎಳಜಿತ ಗಣಪತಿ ಗೌಡ ಅವರನ್ನು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಎದುರು ಉಡುಪಿ ಉಡುಪಿ ಜಿಲ್ಲಾ ಯುವಮೋರ್ಚಾ ನೇತೃತ್ವದಲ್ಲಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಸನ್ಮಾನಿಸಿದರು.

ಈ ಸಮದರ್ಭ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಹೋಬಳಿದಾರ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ವಿಕ್ಯಾತ್ ಶೆಟ್ಟಿ, ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಭಿರಾಜ್ ಸುವರ್ಣ, ಅಕ್ಷಿತ್ ಶೆಟ್ಟಿ ಹೆರ್ಗ, ಮಂಡಲ ಬಿಜೆಪಿ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಯು.ಮೋ ಪ್ರಧಾನ ಕಾರ್ಯದರ್ಶಿ ಆಕಾಶ್ ಪೂಜಾರಿ, ಕೊಲ್ಲೂರು ಪಂಚಾಯತ್ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ, ಸಂದೀಪ್ ಕೊಲ್ಲೂರು, ಉಮೇಶ್ ಶೆಟ್ಟಿ ಕಲ್ಗದ್ದೆ, ಅನುರ್ ಮೆಂಡನ್ ಪಕ್ಷದ ಕಾರ್ಯಕರ್ತರು ಈ ವೇಳೆ ಇದ್ದರು.

► ಕೊಲ್ಲೂರು ಶ್ರೀ ಮೂಕಾಂಬಿಕೆಗೆ ತುಲಾಭಾರ ಸೇವೆ ಸಲ್ಲಿಸಿದ ಸಚಿವ ಸುನಿಲ್‌ ಕುಮಾರ್ – https://kundapraa.com/?p=53259 .

Exit mobile version