Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಕಲಾ ತರಬೇತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು ಅಕ್ಟೋಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ https://www.bcwd.karnataka.gov.in/ ಅಥವಾ ಜಿಲ್ಲಾ ಅಧಿಕಾರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಕಛೇರಿ ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Exit mobile version