Kundapra.com ಕುಂದಾಪ್ರ ಡಾಟ್ ಕಾಂ

ವಿಕಲಚೇತನ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಇ ಸ್ಕಾಲರ್ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಿ-ಮೆಟ್ರಿಕ್( 9 ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಮತ್ತು ಪೋಸ್ಟ್-ಮೆಟ್ರಿಕ್( ಪಿಯುಸಿ ಯಿಂದ ಸ್ನಾತಕೋತ್ತರ ಪದವಿ) ಹಾಗೂ ಮೇಲ್ಪಟ್ಟ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ.

ವಿಕಲಚೇತನ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ http://disabilityaffairs.gov.in/content/ ಅಥವಾ http://www.scholarship.gov.in/ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ದೂ.ಸಂ. 0820-2574810/811ನ್ನು ಸಂಪರ್ಕಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದೆ.

Exit mobile version