Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ

ಕುಂದಾಪರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಾರದಾ ಪೂಜೆ ನೆರವೇರಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ ನವರಾತ್ರಿಯ ಶುಭಾಶಯ ಕೋರಿ ಸರ್ವರಿಗೂ ಶಾರದಾದೇವಿಯು ಆಯುರಾರೋಗ್ಯ ನೀಡಿ ಕಾಪಾಡಲಿ ಎಂದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಲೇಜಿನ ಗ್ರಂಥಪಾಲಕ ಮಹೇಶ್ ನಾಯ್ಕ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ. ಎನ್. ವಂದಿಸಿದರು. ಕನ್ನಡ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version