Site icon Kundapra.com ಕುಂದಾಪ್ರ ಡಾಟ್ ಕಾಂ

ಕೆರಾಡಿ ವರಸಿದ್ಧಿ ವಿನಾಯಕ ಕಾಲೇಜು: ಸಿಎ, ಸಿಎಸ್ ಕೋರ್ಸ್‌ಗಳ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕೆರಾಡಿ ವರಸಿದ್ಧಿ ವಿನಾಯಕ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಿದ್ದು, ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಎ, ಸಿಎಸ್ ಕೋರ್ಸ್‌ಗಳ ಅಧ್ಯಯನ, ಪರೀಕ್ಷಾ ಸಿದ್ಧತೆ ಹಾಗೂ ಅದಕ್ಕಿರುವ ವಿಪುಲ ಉದ್ಯೋಗವಕಾಶಗಳ ಕುರಿತು ಚಾರ್ಟೆಡ್ ಅಕೌಂಟೆಂಟ್ ಗುರುರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಕುಮಾರ್ ಆರ್ ವಹಿಸಿದ್ದು, ಪದವಿ ಕಾಲೇಜಿನ ಮುಖ್ಯಸ್ಥರಾದ ಸತೀಶ್ ನಾಗದ್ದೆ ಪ್ರಾಸ್ತವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿನಿ ಅಶ್ರಿತಾ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಅಭಿಜಿತ್ ಹೆಮ್ಮಾಡಿ ವಂದಿಸಿದರು.

Exit mobile version