Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ರೋಟರಿ ಕ್ಲಬ್‌ನಿಂದ ಪೋಸ್ಟ್‌ಮ್ಯಾನ್ ಪಾಂಡುರಂಗ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ವಿಶ್ವ ಅಂಚೆ ದಿನಾಚರಣೆ ಪ್ರಯುಕ್ತ ಗುಜ್ಜಾಡಿ ಅಂಚೆ ಕಛೇರಿಯಲ್ಲಿ ಪೋಸ್ಟ್‌ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಾಂಡುರಂಗ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಗುಜ್ಜಾಡಿ ಅಂಚೆ ಕಛೇರಿ ಸಮೀಪ ನಡೆದ ಸರಳ ಕಾರ್ಯಕ್ರಮದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಪಾಂಡುರಂಗ ಅವರನ್ನು ಸನ್ಮಾನಿಸಿದರು. ಗುಜ್ಜಾಡಿ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ಕುಮಾರ್, ಝೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.

Exit mobile version