Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಶಾಸ್ತ್ರೀ ವೃತ್ತದ ಬಳಿ ಬ್ರೌನ್ ಶುಗರ್, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಮತ್ತು ತಂಡ ಸೊತ್ತುಗಳ ಸಹಿತ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ನಿವಾಸಿ ಮಹಮ್ಮದ್ ಜಾಫರ್ ಗುಡುಮಿಯಾ (28) ಎಂದು ಗುರುತಿಸಲಾಗಿದೆ.

ಆರೋಪಿಯ ಬಳಿ ಇದ್ದ 1 ಕೆ.ಜಿ 800 ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ ನಲವತ್ತು ಸಾವಿರ ರೂಪಾಯಿ ಹಾಗೂ 1 ಗ್ರಾಂ ಬ್ರೌನ್ ಶುಗರ್ ಅಂದಾಜು ಮೌಲ್ಯ ಹತ್ತು ಸಾವಿರ ರೂಪಾಯಿ, ಎರಡು ಮೊಬೈಲ್ ಪೋನ್, ಒಂದೂವರೆ ಸಾವಿರ ರೂಪಾಯಿ ನಗದನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ ಜಿಲ್ಲಾ ಎಸ್ಪಿ ವಿಷ್ಣುವರ್ಧನ್ ನಿರ್ದೇಶನದಲ್ಲಿ ಎಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಶ್ರೀಕಾಂತ್ ಕೆ. ಹಾಗೂ ಡಿವೈಎಸ್ಪಿ ಕಚೇರಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ರಾಘವೇಂದ್ರ ಉಪ್ಪುಂದ, ವಿಜಯ ಕುಂದಾಪುರ, ರಾಮು ಹೆಗ್ಡೆ, ರಮೇಶ್ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ ರಾಘವೇಂದ್ರ ಮೊಗೇರ, ವಿಜೇತ್, ಜೀಪು ಚಾಲಕ ರಾಜು ಕಾರ್ಯಾಚರಣೆಯಲ್ಲಿ ಇದ್ದರು.

ಇದನ್ನೂ ಓದಿ:
► ಅಂಪಾರು ಆತ್ಮಹತ್ಯೆ ಪ್ರಕರಣಕ್ಕೆ ತಿರುವು: ಪತ್ನಿ ಸೇರಿ ಐವರ ಬಂಧನ – https://kundapraa.com/?p=53881 .

Exit mobile version