ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಹಲ್ಲಿನ ಸ್ವಚ್ಛತೆ ಮತ್ತು ಬಾಯಿಯ ಆರೋಗ್ಯ ದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ದಂತ ಸ್ವಚ್ಛತಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮಾರಲ ಡೆಂಟಲ್ ಕ್ಲಿನಿಕ್ ದಂತ ವೈದ್ಯ ಡಾ. ರಾಜಾರಾಂ ಶೆಟ್ಟಿ, ಮಕ್ಕಳಲ್ಲಿ ಹಲ್ಲಿನ, ಬಾಯಿಯ ಆರೋಗ್ಯದ ಮಹತ್ವ ಮತ್ತು ಹಲ್ಲುಜ್ಜುವ ಸರಿಯಾದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ನ ಅಧ್ಯಕ್ಷರಾದ ಶಶಿಧರ್ ಹೆಗ್ಡೆ, ವಿಶೇಷ ಮಕ್ಕಳ ಪಾಲನೆಯಲ್ಲಿ ಫೋಷಕರು ಅತ್ಯಂತ ತಾಳ್ಮೆ ಮತ್ತು ಕಾಳಜಿಯಿಂದ ಬೆಳೆಸಬೇಕು ಎಂದರು ಮತ್ತು ರೋಟರಿ ಕ್ಲಬ್ ಕುಂದಾಪುರ ಇಂತಹ ಕಾರ್ಯಗಳಿಗೆ ಸದಾ ಬೆಂಬಲವನ್ನು ನೀಡಲಿದೆ ಎಂಬ ಭರವಸೆಯನ್ನು ನೀಡಿದರು.
ತಲ್ಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಭೀಮವ್ವ ಪಂಚಾಯತ್ ಮೂಲಕ ವಿಶೇಷ ಮಕ್ಕಳಿಗೆ ದೂರೆಯುವ ಸವಲತ್ತುಗಳನ್ನು ದೂರಕಿಸಿ ಕೊಡುವಲ್ಲಿ ವಿಶೇಷ ಪ್ರಯತ್ನವನ್ನು ನಡೆಸುವುದರೊಂದಿಗೆ ಸಂಸ್ಥೆಯ ಚಟುವಟಿಕೆಗಳನ್ನು ಪ್ರಶಂಸಿದರು.
ಈ ಸಂದರ್ಭ ಕುಂದಾಪುರ ರೋಟರಿ ಕ್ಲಬ್ನ ಕಾರ್ಯದರ್ಶಿ ಕುಮಾರ್ ಕಾಂಚನ್, ಸಂಸ್ಥೆಯ ಹಿತೈಷಿಗಳಾದ ನಿವೃತ್ತ ಕಸ್ಟಮ್ಸ್ ಮತ್ತು ಜಿ.ಎಸ್.ಟಿ ಅಸಿಸ್ಟೆಂಟ್ ಕಮೀಷನರ್ ಪ್ರಭಾತ್ ಶೆಟ್ಟಿ ಉಪಸ್ಥಿತರಿದ್ದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಸ್ವಾಗತಿಸಿ ಸಹ ಶಿಕ್ಷಕಿ ಶ್ರುತಿ ವಂದಿಸಿದರು ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.