Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಕನ್ನಡ ಗೀತ ಗಾಯನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಮೀನುಗಾರಿಕಾ ಇಲಾಖೆ, ಉಪನಿರ್ದೇಶಕರು, ಬಂದರು ಯೋಜನೆ ಗಂಗೊಳ್ಳಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಗಂಗೊಳ್ಳಿ, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘ, ಹಸಿ ಮೀನು ವ್ಯಾಪಾರಸ್ಥರ ಸಂಘ ಗಂಗೊಳ್ಳಿ, ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಹಾಗೂ ವಿವಿಧ ಮೀನುಗಾರ ಸಂಘಟನೆಗಳ ಜಂಟಿ ಆಶ್ರಯದಲ್ಲಿ ’ಮಾತಾಡ್ ಮಾತಾಡ್ ಕನ್ನಡ’ ಕನ್ನಡ ರಾಜ್ಯೋತ್ಸವ ಅಭಿಯಾನ ಅಂಗವಾಗಿ ಕನ್ನಡ ಗೀತ ಗಾಯನ ಕಾರ್ಯಕ್ರಮ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಗುರುವಾರ ಜರಗಿತು.

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಮಲತಾ, ಗಂಗೊಳ್ಳಿ ಗ್ರಾಮ ಪಂಚಾಯತ್ ಸದಸ್ಯ ಬಿ.ರಾಘವೇಂದ್ರ ಪೈ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಗಂಗೊಳ್ಳಿ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷ ನಾರಾಯಣ ಖಾರ್ವಿ, ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಜನಾರ್ದನ ಖಾರ್ವಿ, 370 ಬೋಟ್ ಮಾಲಕರ ಸಂಘದ ಅಧ್ಯಕ್ಷ ಸೌಪರ್ಣಿಕಾ ಬಸವ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ‘ಹುಟ್ಟಿದರೆ ಕನ್ನಡ ನಾಡಲ್ಲೆ ಹುಟ್ಟಬೇಕು’ ‘ಬಾರಿಸು ಕನ್ನಡ ಡಿಂಡಿಮವ’ ಮತ್ತು ‘ಜೋಗದ ಸಿರಿ ಬೆಳಕಿನಲ್ಲಿ’ ಹಾಡುಗಳನ್ನು ಹಾಡಿದರು.

ಗಂಗೊಳ್ಳಿ ಮೀನುಗಾರಿಕೆ ಇಲಾಖೆ ಉಪನಿರ್ದೇಶಕಿ ಅಂಜನಾದೇವಿ ಸ್ವಾಗತಿಸಿದರು. ಮೀನುಗಾರಿಕೆ ಇಲಾಖೆಯ ಗೋಪಾಲಕೃಷ್ಣ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Exit mobile version