Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಧನ್ವಂತರಿ ಜಯಂತಿ, ಆಯುರ್ವೇದದಿಂದ ಪೋಷಣ್ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಇಲ್ಲಿನ ಕಲಾಮಂದಿರದಲ್ಲಿ ಮಂಗಳವಾರ 6ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಪ್ರಯುಕ್ತ ಆಯುರ್ವೇದದಿಂದ ಪೋಷಣ್ ಕಾರ್ಯಕ್ರಮ ಜರುಗಿತು

ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಮಾತನಾಡಿ ಅಲೋಪತಿ ವೈದ್ಯ ಪದ್ಧತಿಯನ್ನು ತಕ್ಷಣದ ರೋಗ ಪರಿಹಾರಕ್ಕಾಗಿ ಅನುಸರಿಸಲಾಗುತ್ತದೆ. ಆದರೆ ಧೀರ್ಘಕಾಲದ ರೋಗಗಳಿಗೆ ಆಯುರ್ವೇದ ವೈದ್ಯ ಪದ್ಧತಿಯೇ ಉತ್ತಮವೆಂದ ಜಗತ್ತು ಒಪ್ಪಿದೆ. ಆಯುರ್ವೇದದಲ್ಲಿ ಪಥ್ಯಗಳನ್ನು ಸರಿಯಾಗಿ ಅನುಸರಿಸಿದರೆ ಉತ್ತಮ ಪರಿಣಾಮ ಬೀರುತ್ತದೆ.

ಕುಂದಾಪುರ ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೆಯ ಎಸ್. ನಾಯ್ಕ್, ಕುಂದಾಪುರ ಸರಕಾರಿ ಆಸ್ಪತ್ರೆ ತಜ್ಞ ವೈದ್ಯ ಡಾ. ನಾಗೇಶ್, ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ, ಸ.ಪ.ಪೂ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ, ಉಪಪ್ರಾಂಶುಪಾಲರಾದ ವಿನುತಾ ಗಾಂವ್ಕರ್, ಆಯುಷ್ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಶ್ಯಾಮ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಡಾ. ವಿನಯಾ ಪ್ರಾರ್ಥಿಸಿದರು. ಡಾ. ಪ್ರದೀಪ ಎಸ್. ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಡಾ. ಸರ್ವೋತ್ತಮ ಶೆಟ್ಟಿ ನಿರೂಪಿಸಿದರು.

Exit mobile version