ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಕೇಂದ್ರ ಸರ್ಕಾರ ಬೆಲೆ ಏರಿಕೆ ಬಿಸಿಯಲ್ಲಿದ್ದ ಜನರಿಗೆ ದೀಪಾವಳಿಯ ಗಿಫ್ಟ್ ನೀಡಿದ್ದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಕಡಿತಗೊಳಿಸಿದೆ. ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಲಾಗಿದ್ದು ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಕೇಂದ್ರ ಸರಕಾರ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ.