Kundapra.com ಕುಂದಾಪ್ರ ಡಾಟ್ ಕಾಂ

ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಮಲೆನಾಡು ಪ್ರಾಂತ್ಯದಲ್ಲಿ ಬುಧವಾರ ಅಪರಾಹ್ನದ ಬಳಿಕ ಭಾರಿ ಗಾಳಿ ಮಳೆ ಉಂಟಾಗಿದ್ದು, ಗಾಳಿ ಮಳೆಯ ಅಬ್ಬರಕ್ಕೆ ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಸೌಡ ಪರ್ವತಬೆಟ್ಟು ನಿವಾಸಿ ಬೇಬಿ ಶೆಟ್ತಿ ಅವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಗೊಂಡಿದೆ. ರೂ.1ಲಕ್ಷ ನಷ್ಟ ಎಂದು ಅಂದಾಜಿಸಲಾಗಿದೆ.

ಹಲವೆಡೆ ಗ್ರಾಮ ಪಂಚಾಯಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಲವಕರ ಶೆಟ್ಡಿ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Exit mobile version