Site icon Kundapra.com ಕುಂದಾಪ್ರ ಡಾಟ್ ಕಾಂ

ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಗೋಪೂಜೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದೀಪಾವಳಿಯ ಪ್ರಯುಕ್ತ ಗೋಪೂಜಾ ಕಾರ್ಯಕ್ರಮ ಗೋದೂಳಿ ಮುಹೂರ್ತದಲ್ಲಿ ನಡೆಯಿತು.

ಬೈಂದೂರು ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಗೋಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಗ್ರಾಸ ನೀಡಿದರು.

ಈ ಸಂದರ್ಭ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಮಂಜಯ್ಯ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅನಂತ ಅಡಿಗ ಸೌಕೂರು, ಕುಪ್ಪ ಗುಲ್ವಾಡಿ, ರೀತಾ ದೇವಾಡಿಗ ಸೌಕೂರು, ಆಶಾ ಸಂತೋಷ್ ಪೂಜಾರಿ ಮುಕ್ಕೋಡು ನೇರಳಕಟ್ಟೆ, ಜಯರಾಮ ಶೆಟ್ಟಿ ಹಡಾಳಿ, ಅಂಪಾರು, ಕೆ.ಸುಬ್ಬಣ್ಣ ಶೆಟ್ಟಿ ಕೆಂಚನೂರು, ಉಮೇಶ ಮೊಗವೀರ ಕಂಡ್ಲೂರು, ಜಿ.ಶೇಖರ ಪೂಜಾರಿ ಗುಲ್ವಾಡಿ ಹಾಗೂ ರಘುರಾಮ ಶೆಟ್ಟಿ, ದೇವಳದ ಅರ್ಚಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version