Kundapra.com ಕುಂದಾಪ್ರ ಡಾಟ್ ಕಾಂ

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ, ರೂ 27.6 ಲಕ್ಷ ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ.177 ಕೋಟಿ ವ್ಯವಹಾರ ನಡೆಸಿ ರೂ 27.6 ಲಕ್ಷ ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಲಾಭಾಂಶ ಘೋಷಿಸಲಾಗಿದೆ ಎಂದು ಸೊಸೈಟಿಯ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು.

ಸೋಮವಾರ ನಡೆದ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಸಂಘವು 19 ವರ್ಷ ಪೂರೈಸಿದೆ. ಐದು ಕಡೆ ಶಾಖೆಗಳನ್ನು ಹೊಂದಿದ್ದು, ಕುಂದಾಪುರ ಶಾಖೆ ಸ್ವಂತ ನಿವೇಶನ ಕಟ್ಟಡ ಹೊಂದಿದೆ. ಬೈಂದೂರಿನ ಪ್ರಧಾನ ಕಚೇರಿ ಕಟ್ಟಡ ನಿರ್ಮಾಣಕ್ಕೆ ನಿವೇಶನ ಖರೀದಿಸಲಾಗಿದೆ. ಆಡಳಿತ ಮಂಡಳಿ, ಸಿಬ್ಬಂದಿ ಸಹಕಾರದಿಂದ ಸೊಸೈಟಿ ಪ್ರಗತಿ ಸಾಧಿಸುತ್ತಿದೆ ಎಂದು ಅವರು ಹೇಳಿದರು.

ಉತ್ತಮ ಠೇವಣಿ ಹಾಗೂ ಸಾಲ ವಸೂಲಾತಿ ಮಾಡಿದ ಸಿದ್ಧಾಪುರ ಶಾಖೆಯ ಪ್ರಬಂಧಕಿ ಕವಿತಾ ಪೂಜಾರಿ ಹಾಗೂ ಸಿಬ್ಬಂದಿ ರವೀಂದ್ರ ಪೂಜಾರಿ, ಹಾಲಾಡಿ ಶಾಖೆಯ ಪ್ರಬಂಧಕ ಗೋಪಾಲ ಪೂಜಾರಿ ಹಾಗೂ ಸಿಬ್ಬಂದಿಯನ್ನು ಗುರುತಿಸಲಾಯಿತು.

ಉಪಾಧ್ಯಕ್ಷ ಎಸ್. ರಾಜು ಪೂಜಾರಿ ಸ್ವಾಗತಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ್ ಬಿ. ಪೂಜಾರಿ ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು. ಉನ್ನತ ಶಿಕ್ಷಣ ಪಡೆಯುತ್ತಿರುವ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಿರ್ದೇಶಕರಾದ ಕೆ. ಶಂಕರ ಪೂಜಾರಿ, ಕೆ. ಶ್ರೀನಿವಾಸ ಪೂಜಾರಿ, ಚಿಕ್ಕು ಪೂಜಾರಿ, ಎನ್. ಅಣ್ಣಪ್ಪ ಬಿಲ್ಲವ, ಜಯಸೂರ್ಯ ಪೂಜಾರಿ, ಕಲ್ಪನಾ ಬಿ. ಪೂಜಾರಿ, ಎಂ. ಪುಟ್ಟ ಬಿಲ್ಲವ, ಶೇಖರ ಪೂಜಾರಿ, ಯು. ಕೇಶವ ಪೂಜಾರಿ, ಉದಯ ಜಿ. ಪೂಜಾರಿ ಉಪಸ್ಥಿತರಿದ್ದರು.

Exit mobile version