ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆ ಸರಕಾರದ ಆದೇಶದಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಕುಂದಾಪುರ ಇವರ ಸಹಯೋಗದಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಗೋಪೂಜಾ ವಿಧಿ ವಿಧಾನಗಳು ನಡೆಯಿತು.
ಈ ಸಂದರ್ಭ ದೇವಳದ ಹಿರಿಯ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ದೇವಳದ ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ದೇವಳದ ಮ್ಯಾನೇಜರ್ ನಟೇಶ್ ಕಾರಂತ್, ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸೂರ್ಯನಾರಾಯಣ ಉಪಾಧ್ಯಾಯ, ನಿವೃತ್ತ ಜಾನವಾರು ಅಧಿಕಾರಿ ಸುಬ್ರಾಯ ಗಾಣಿಗ ಹಾಗೂ ಅರ್ಚಕ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.