ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹೆಮ್ಮಾಡಿ ಶ್ರೀ ಲಕ್ಷ್ಮೀನಾರಾಯಣ ರಿಕ್ಷಾ ನಿಲ್ದಾಣದ ರಿಕ್ಷಾ ಚಾಲಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರವೀಣ್ ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.
ಗೌರವಾಧ್ಯಕ್ಷರಾಗಿ ಮಂಜುನಾಥ ಮೊಗವೀರ, ಗೌರವ ಸಲಹೆಗಾರರಾಗಿ ಜೇಮ್ಸ್ ರೆಬೆರೋ, ಉಪಾಧ್ಯಕ್ಷರಾಗಿ ಸುಕುಮಾರ್ ಪೂಜಾರಿ, ಕಾರ್ಯದರ್ಶಿಯಾಗಿ ಅರುಣ್ ಎಲ್ ಮೊಗವೀರ, ಖಜಾಂಚಿಯಾಗಿ ಸಂತೋಷ್ ಎನ್ . ದೇವಾಡಿಗ ಅವರು ಆಯ್ಕೆಯಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷರಾದ ಮಂಜುನಾಥ ಮೊಗವೀರ ಅವರು ನೂತನ ಅಧ್ಯಕ್ಷ ಪ್ರವೀಣ್ ದೇವಾಡಿಗ ಅವರಿಗೆ ಸಂಘದ ಪುಸ್ತಕವನ್ನು ಹಸ್ತಾಂತರಿಸಿದರು.
ಈ ಸಂದರ್ಭ ಹೆಮ್ಮಾಡಿ ಗ್ರಾ.ಪಂ ಅಧ್ಯಕ್ಷರಾದ ಯು ಸತ್ಯನಾರಾಯಣ್ ಶೇರುಗಾರ್, ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಕಾಳೂರ ಮನೆ, ಸ್ಥಳೀಯ ಮುಖಂಡರಾದ ಕೃಷ್ಣಮೂರ್ತಿ (ಪಾಂಡು) ರಾವ್ ಮೊದಲಾದವರು ಉಪಸ್ಥಿತರಿದ್ದರು. ರಿಕ್ಷಾ ಚಾಲಕ ಸಂಘದ ರವಿ.ಕೆ ಸ್ವಾಗತಿಸಿ, ನಿರೂಪಿಸಿದರು.