Site icon Kundapra.com ಕುಂದಾಪ್ರ ಡಾಟ್ ಕಾಂ

ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಮುಸಲ್ಮಾನರು, ಕ್ರೈಸ್ತರು, ಜೈನರು, ಬೌದ್ಧರು, ಸಿಖ್ಕರು ಮತ್ತು ಪಾರ್ಸಿ ಜನಾಂಗದ ಸಿ.ಇ.ಟಿ / ನೀಟ್ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ನಿಗಮದ ವೆಬ್ಸೈಟ್ https://kmdconline.karnataka.gov.in/Portal/ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೆ.ಎಂ.ಡಿ.ಸಿ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಕೌನ್ಸಿಲಿಂಗ್ ಮುಗಿದ ಕೂಡಲೇ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಮೌಲಾನಾ ಆಜಾದ್ ಭವನ, ಶಿವಳ್ಳಿ ಗ್ರಾಮ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version