Kundapra.com ಕುಂದಾಪ್ರ ಡಾಟ್ ಕಾಂ

ಸ್ಯಾಕ್ಸೋಫೋನ್ ವಾದಕ ಸಂಜಿತ್ ದೇವಾಡಿಗಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಆಯ್ಕೆಯಾಗಿದ್ದಾರೆ.

ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಮತ್ತು ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ದೇವಾಡಿಗ ಅವರ ಪುತ್ರ.

ನವೆಂಬರ್ 14ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರ ಉಪಸ್ಥಿತಿಯಲ್ಲಿ ಈ ಗೌರವವನ್ನು ಪ್ರದಾನ ಮಾಡಲಾಗುವುದು ಎಂದು ಮಕ್ಕಳ ವಿಭಾಗದ ಸಂಚಾಲಕರಾದ ಡಾ.ಶೇಖರ ಅಜೆಕಾರು ಅವರು ತಿಳಿಸಿದ್ದಾರೆ.

Exit mobile version