ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಠಾರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಟಲ್ ಟಿಂಕರಿಂಗ್ ಲ್ಯಾಬ್‌ಗೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ ನೀಡಿ ಲ್ಯಾಬ್ ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಲ್ಲಿನ ಕೌಶಲ್ಯತೆ ಹೆಚ್ಚಿಸಲು ಮತ್ತು ಮಕ್ಕಳಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಕೇಂದ್ರ ಸರಕಾರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಪ್ರಾರಂಭಿಸುತ್ತಿದೆ. ಗಂಗೊಳ್ಳಿಯ ಎಸ್.ವಿ.ಶಾಲೆಯಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ ಅತ್ಯುತ್ತಮವಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಕರು ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಪ್ರಯತ್ನ ನಡೆಸಬೇಕು ಎಂದರು.
ಗಂಗೊಳ್ಳಿಯ ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಶಾಲೆಯ ಸಂಚಾಲಕ ಎನ್.ಸದಾಶಿವ ನಾಯಕ್, ಗಂಗೊಳ್ಳಿ ಗ್ರಾಪಂ ಸದಸ್ಯರಾದ ಬಿ. ರಾಘವೇಂದ್ರ ಪೈ, ಬಿ. ಲಕ್ಷ್ಮೀಕಾಂತ ಮಡಿವಾಳ, ದಾನಿ ಯು. ನಾರಾಯಣ ಪೈ, ಶಾಲಾ ಆಡಳಿತ ಮಂಡಳಿ ಸದಸ್ಯರಾದ ಗೋವಿಂದ್ರಾಯ ಆಚಾರ್ಯ, ಕೆ.ರಾಮನಾಥ ನಾಯಕ್, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಲ್ಯಾಬ್‌ನ ಕೋ-ಆರ್ಡಿನೇಟರ್ ವೆಂಕಟೇಶಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.