Site icon Kundapra.com ಕುಂದಾಪ್ರ ಡಾಟ್ ಕಾಂ

ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಜವಾನರ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಕಛೇರಿ ಜವಾನರ ಹುದ್ದೆಯನ್ನು ಮಾಸಿಕ ಗೌರವಧನ ಆಧಾರದಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರುವ, ಕಛೇರಿಯಲ್ಲಿ ಹಾಗೂ ಇತರೆ ಶುಚಿತ್ವ ಕಾಪಾಡುವ ಕೆಲಸ ನಿರ್ವಹಿಸಿದ ಅನುಭವ ಹೊಂದಿರುವ ಮತ್ತು ಗರಿಷ್ಠ 40 ವರ್ಷದೊಳಗಿನ ಅಭ್ಯರ್ಥಿಗಳು, ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘದ ಅಧ್ಯಕ್ಷರ ಹೆಸರಿಗೆ ಅರ್ಜಿ ಬರೆದು, ಸದರಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ನವೆಂಬರ್ 25 ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Exit mobile version