Kundapra.com ಕುಂದಾಪ್ರ ಡಾಟ್ ಕಾಂ

ಮೂಡುಬಗೆ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯಲ್ಲಿ ಮಕ್ಕಳ ಹಬ್ಬ 2021

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ವಾಗ್ಜ್ಯೋತಿ ಬಳಗ ಬೈಂದೂರು, ಲಾವಣ್ಯ ರಿ. ಬೈಂದೂರು, ಜೇಸಿಐ ಬೈಂದೂರು ಸಿಟಿ, ಬಿಜೆಪಿ ಮಹಿಳಾ ಮೋರ್ಚಾ ಬೈಂದೂರು, ಸ್ಪೋರ್ಟ್ಸ್ ಕನ್ನಡ ಡಾಟ್ ಕಾಮ್ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಅಂಗವಾಗಿ ಅಂಪಾರು- ಮೂಡುಬಗೆ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯಲ್ಲಿ ಮಕ್ಕಳ ಹಬ್ಬ 2021 ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಯೂನಿಯನ್ ಬ್ಯಾಂಕ್ ಇಂಡಿಯಾ ಕೊಲ್ಲೂರು ಶಾಖೆಯ ಪ್ರಬಂಧಕ ರಾಮಕೃಷ್ಣ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಾವಣ್ಯ ರಿ. ಬೈಂದೂರು ಇದರ ಅಧ್ಯಕ್ಷ ಹರೆಗೋಡು ಉದಯ್ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಹೋಟೆಲ್ ಉಡುಪಿ ಸವಿರುಚಿ ಮಾಲೀಕ ವಾಸುದೇವ ದೇವಾಡಿಗ, ಜೇಸಿಐ ಕುಂದಾಪುರ ಸಿಟಿಯ ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಅಂಪಾರು ಜಿ.ಪಂ ಮಾಜಿ ಸದಸ್ಯೆ ಜ್ಯೋತಿ ಅಚ್ಯುತ್, ರಾಜ್ಯ ಯೋಜನಾ ಆಯೋಗ ಅಧಿಕಾರೇತರ ಸದಸ್ಯೆ ಪ್ರೀಯದರ್ಶಿನಿ ಬೆಸ್ಕೂರು, ಜೇಸಿಐ ಬೈಂದೂರು ಸಿಟಿ ಅಧ್ಯಕ್ಷ ಪಿ. ಶ್ರೀಧರ್ ಆಚಾರ್ಯ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಸಾಯಿನಾಥ್ ಶೇಟ್ ಕುಂದಾಪುರ, ಬೈಂದೂರು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಕೊಲ್ಲೂರು ತಾ.ಪಂ ಮಾಜಿ ಸದಸ್ಯೆ ಗ್ರೀಷ್ಮಾ ಗಿರಿಧರ ಬಿಢೆ, ಉಪಸ್ಥಿತರಿದ್ದರು.

ಬೈಂದೂರು ವಾಗ್ಜ್ಯೋತಿ ಬಳಗ ಸಂಚಾಲಕ ಹರೆಗೋಡು ಸುಶಾಂತ್ ಆಚಾರ್ ಬೈಂದೂರು ಸ್ವಾಗತಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ಎಚ್ ಪ್ರಾಸ್ತಾವಿಕ ಮಾತನಾಡಿದರು. ಅಕ್ಷತಾ ಗಿರೀಶ್ ಐತಾಳ್ ಕುಂದಾಪುರ ಕಾರ್ಯಕ್ರಮ ನಿರ್ವಹಿಸಿ/ವಂದಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಹಭೋಜನ ನಡೆಯಿತು.

Exit mobile version