Kundapra.com ಕುಂದಾಪ್ರ ಡಾಟ್ ಕಾಂ

ನಟ ಪುನೀತ್‌ಗೆ ಗಂಗೊಳ್ಳಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯರೂಪಕ ದೀಪಾಂಜಲಿ ಅರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಇತ್ತೀಚೆಗೆ ನಿಧನರಾದ ಪುನೀತ್ ರಾಜ್‌ಕುಮಾರ್ ಅವರಿಗೆ ಗಂಗೊಳ್ಳಿಯ ಮೇಲ್‌ಗಂಗೊಳ್ಳಿ ಸರಕಾರಿ ಕಿರಿಯ ಪ್ರಾಥಮಿಕ (ಹವೇ) ಶಾಲೆಯ ವಿದ್ಯಾರ್ಥಿಗಳು ನೃತ್ಯರೂಪಕದ ಮೂಲಕ ಪುಷ್ಪಾಂಜಲಿ, ದೀಪಾಂಜಲಿ ಅರ್ಪಿಸಿದರು.

ನೃತ್ಯಪಟು ನಟರಾಜ್ ನಿರ್ದೇಶನದಲ್ಲಿ ಶಾಲೆಯ ವಿದ್ಯಾರ್ಥಿಗಳು ಬೊಂಬೆ ಹೇಳುತೈತೆ ಗಾಯನಕ್ಕೆ ನೃತ್ಯದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ನೃತ್ಯದ ಕೊನೆಯಲ್ಲಿ ಬಾವಪರವಶರಾದ ಮಕ್ಕಳು ಪುನೀತ್ ಭಾವಚಿತ್ರಕ್ಕೆ ಮುತ್ತನ್ನು ನೀಡಿ ಅಗಲಿದ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶಾಲೆಯ ಮುಖ್ಯ ಶಿಕ್ಷಕ ರಮೇಶ ಮಹಾಲೆ, ಸಹಶಿಕ್ಷಕಿ ಲಲಿತಾ, ಲೈಟ್‌ಹೌಸ್ ಹಿಲ್ ಫ್ರೆಂಡ್ಸ್ ಸದಸ್ಯರು ಹಾಗೂ ಶಾಲೆಯ ಹಳೆ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.

Exit mobile version