Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಉಚಿತ ಕಾನೂನು ಅರಿವು ನೆರವು ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕಾನೂನು ಸೇವಾ ಸಮಿತಿ ರಚನೆಯ ಹಿಂದಿನ ಉದ್ದೇಶ ಸಮಾಜದ ಕಟ್ಟಕಡೆ ಜನಗಿರಗೂ ನ್ಯಾಯ ಸಿಗಬೇಕು ಎನ್ನುವುದಾಗಿದೆ. ಮಹಿಳೆಯರು, ಮಕ್ಕಳು ನ್ಯಾಯದಿಂದ ವಂಚಿತರಾಗಬಾರದು ಎನ್ನುವ ಉದ್ದೇಶ ಕೂಡಾ ಇದರಲ್ಲಿದೆ ಎಂದು ಕುಂದಾಪುರ ಹಿರಿಯ ಸಿವಿಲ್ ನ್ಯಾಯಾದೀಶ ರಂಗೇಗೌಡ ಹೇಳಿದರು.

ಅವರು, ಕುಂದಾಪುರ ತಾಲೂಕು ಕಾನೂನು ಸೇವಾ ಸಮಿತಿ, ಬಾರ್ ಅಸೋಸಿಯೇಶನ್, ತಾಲೂಕು ಆಡಳಿತ, ಕುಂದಾಪುರ ತಾಪಂ. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಉಚಿತ ಕಾನೂನು ಅರಿವು ನೆರವು ಮಾಹಿತಿ ಸಮಾರೋಪ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ದೇವಿಂದ್ರ ಎಸ್. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶ ದಿನೇಶ್ ಮುಗಳಿ, ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ನಾಗರತ್ನಮ್ಮ, ಕುಂದಾಪುರ ಬಾರ್ ಅಸೋಸಿಯೇಶನ್ ಅಧ್ಯಕ್ಷ ಎಸ್. ನಿರಂಜನ ಹೆಗ್ಡೆ, ಡಿವೈಎಸ್‌ಪಿ ಶ್ರೀಕಾಂತ್ ಕೆ., ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ತಾ.ಪಂ. ಪ್ರಭಾರ ಕಾರ‍್ಯ ನಿರ್ವಹಣಾಧಿಕಾರಿ ಶ್ವೇತಾ ಎನ್., ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನರಸಿಂಹ ಪೂಜಾರಿ ಇದ್ದರು.

ಕಾನೂನು ಸೇವಾ ಪ್ರಾಧಿಕಾರದ ಉಯೋದ್ದೇಶ, ಮೌಲ್ಯಾಧಾರಿತ ಮಕ್ಕಳ ದಿನಾಚರಣೆ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಕುಂದಾಪುರದ ವಕೀಲೆ ಪಿಂಕಿ ಕರ್ವೆಲ್ಲೊ ಹಾಗೂ ಮಾದಕ ವಸ್ತುಗಳ ಸೇವೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಕೋಟೇಶ್ವರದ ಎನ್.ಆರ್. ಆಚಾರ್ಯ ಆಸ್ಪತ್ರೆಯ ಮನೋವೈದ್ಯೆ ಡಾ. ಮಹಿಮಾ ಆಚಾರ್ಯ ಉಪನ್ಯಾಸ ನೀಡಿದರು.

ಬಾರ್ ಅಸೋಶಿಯೇಶನ್ ಪ್ರಧಾನ ಕಾರ್ಯದರ್ಶಿ ಎಚ್.ಪ್ರಮೋದ್ ಹಂದೆ ಪ್ರಸ್ತಾವಿಕ ಮಾತನಾಡಿದರು. ಆಶಾಲತಾ ಸ್ವಾಗತಿಸಿದರು. ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.

Exit mobile version