Site icon Kundapra.com ಕುಂದಾಪ್ರ ಡಾಟ್ ಕಾಂ

‘ಜನ ಸ್ವರಾಜ್’ ಯಾತ್ರೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ಉಡುಪಿ ಜಿಲ್ಲಾ ಬಿಜೆಪಿಯ ನೇತೃತ್ವದಲ್ಲಿ ನ.19ರಂದು ಉಡುಪಿ ಪುರಭವನದಲ್ಲಿ ನಡೆಯಲಿರುವ ‘ಜನ ಸ್ವರಾಜ್’ ಯಾತ್ರೆ ಹಾಗೂ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಹೆಮ್ಮಾಡಿ ಜಯಶ್ರೀ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುಕುಮಾರ್ ಶೆಟ್ಟಿ, ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರಾದ ಕಿಶೋರ್ ಕುಮಾರ್, ರವಿ ಅಮೀನ್, ಉಪ್ಪುಂದ ಆನಂದ್ ಖಾರ್ವಿ ಉಪಸ್ಥರಿದ್ದರು.

ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು ಹಾಗೂ ಪ್ರಕಾಶ್ ಪೂಜಾರಿ ವಂದಿಸಿದರು.

Exit mobile version