ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯ ಫೈಟ್ ವಿದ್ ಗೋಲ್ಡನ್ ಬ್ರೌನ್ ವಿಭಾಗದಲ್ಲಿ ಗಂಗೊಳ್ಳಿಯ ಶ್ಯಾಮ್ ಜಿ. ಎನ್. ಪೂಜಾರಿ ದ್ವಿತೀಯ ಸ್ಥಾನವನ್ನು ಗಳಿಸಿ ಬೆಳ್ಳಿ ಪದಕ ಪಡೆದುಕೊಂಡಿದ್ದಾನೆ.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯಲ್ಲಿ ಓದುತ್ತಿರುವ ಶ್ಯಾಮ್ ಗಂಗೊಳ್ಳಿಯ ಖ್ಯಾತ ಛಾಯಾಗ್ರಾಹಕ ಗಣೇಶ್ ಪಿ. ಪೂಜಾರಿ ಮತ್ತು ಮಾಲತಿ ದಂಪತಿಯ ಪುತ್ರ. ಕರಾಟೆಪಟು ಶಶಾಂಕ್ ಶೆಣೈ ಅವರಿಂದ ತರಬೇತಿಯನ್ನು ಪಡೆದಿದ್ದಾನೆ.