ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಬೈಂದೂರು ತಾಲೂಕಿನ ತ್ರಾಸಿ ವಲಯದ ಗುಜ್ಜಾಡಿ ನಾಗದೇವತೆ ಜ್ಞಾನವಿಕಾಸ ಕೇಂದ್ರದಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ತಾಲೂಕಿನ ಅರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ ಅವರು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ಕಾಯಿಲೆ ಹಾಗೂ ಅದರಿಂದ ರಕ್ಷಣೆ ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಮನೆಯ ಸುತ್ತಮುತ್ತಲಿನ ಪ್ರದೇಶ ಮತ್ತು ಮನೆಯನ್ನು ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಜ್ಞಾನವಿಕಾಸ ಕೇಂದ್ರದ ಮಹಿಳೆಯರಿಗೆ ಶುಗರ್ ಮತ್ತು ರಕ್ತದೊತ್ತಡ ಪರೀಕ್ಷೆಯನ್ನು ನಡೆಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಶುಭ ಹಾರೈಸಿದರು. ಮರವಂತೆ ಪ್ರಾಥಮಿಕ ಅರೋಗ್ಯ ಕೇಂದ್ರದ ಅರೋಗ್ಯ ಸಹಾಯಕಿ ಅನಿಸ್ಕರಿ ಅರೋಗ್ಯ ತಪಾಸಣೆ ನಡೆಸಿದರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಧಿಕಾರಿ ಗೀತಾ, ತ್ರಾಸಿ ವಲಯ ಮೇಲ್ವಿಚಾರಕ ಗಿರೀಶ್. ಸೇವಾಪ್ರತಿನಿಧಿ ಮಹಾಲಕ್ಷ್ಮೀ, ಸಂಯೋಜಕಿ ವೀಣಾ, ಆಶಾ ಕಾರ್ಯಕರ್ತೆ ಜ್ಯೋತಿ ಹಾಗೂ ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.