Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಜಿ.ಎಸ್.ಬಿ. ಮಹಿಳಾ ಮಂಡಳಿಯಿಂದ ಸಂಶೋಧಕ ಬಿ. ಶ್ರೀಕಾಂತ ಪೈ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ಬ್ಲ್ಯಾಕ್ ಫಂಗಸ್‌ಗೆ ಔಷಧಿಯನ್ನು ಸಂಶೋಧಿಸಿದ ಸಂಶೋಧಕ ಗಂಗೊಳ್ಳಿ ಮೂಲದ ಬಿ.ಶ್ರೀಕಾಂತ ಪೈ ಅವರನ್ನು ಗಂಗೊಳ್ಳಿ ಜಿ.ಎಸ್.ಬಿ.ಮಹಿಳಾ ಮಂಡಳಿ ವತಿಯಿಂದ ಗಂಗೊಳ್ಳಿ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವಿದ್ಯಾಧಿರಾಜ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಜಿಎಸ್‌ಬಿ ಮಹಿಳಾ ಮಂಡಳಿ ಅಧ್ಯಕ್ಷೆ ನಿರ್ಮಲಾ ಡಿ.ನಾಯಕ್, ಕಾರ್ಯದರ್ಶಿ ವಿಜಯಶ್ರೀ ವಿ.ಆಚಾರ್ಯ, ದೇವಸ್ಥಾನದ ಆಡಳಿತ ಮೊಕ್ತೇಸರ ಎನ್.ಸದಾಶಿವ ನಾಯಕ್, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರಾದ ಜಿ.ವೇದವ್ಯಾಸ ಆಚಾರ್ಯ, ಜಿ.ವೆಂಕಟೇಶ ನಾಯಕ್, ಎಂ.ರಾಮಕೃಷ್ಣ ಪೈ ಅವರು ಬಿ.ಶ್ರೀಕಾಂತ ಪೈ ಅವರನ್ನು ಗಂಗೊಳ್ಳಿ ಜಿ.ಎಸ್.ಬಿ.ಮಹಿಳಾ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಿ ಶುಭ ಹಾರೈಸಿದರು.

ಸುರೇಖಾ ಎಸ್.ಪೈ, ಜಿಎಸ್‌ಬಿ ಮಹಿಳಾ ಮಂಡಳಿ ಪದಾಧಿಕಾರಿಗಳು, ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Exit mobile version