Kundapra.com ಕುಂದಾಪ್ರ ಡಾಟ್ ಕಾಂ

ಪರಿಷತ್ ಚುನಾವಣೆ: ದ.ಕ – ಉಡುಪಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಜುನಾಥ್ ಭಂಡಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಮಂಗಳೂರು,ನ.23:
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯಾಡಳಿತ ಸಂಸ್ಥೆ ಚುನಾವಣಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಸದಸ್ಯ ಮಂಜುನಾಥ ಭಂಡಾರಿ ಮಂಗಳವಾರ ನಾಮಪತ್ರ ಸಲ್ಲಿಸಿದರು. 

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಯಾಗಿರುವ ಡಾ. ರಾಜೇಂದ್ರ ಕೆ.ವಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶಾಸಕ ಯು.ಟಿ ಖಾದರ್, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಬೈಂದೂರು ಮಾಜಿ ಶಾಸಕರುಗಳಾದ ಕೆ. ಗೋಪಾಲ ಪೂಜಾರಿ, ಶಕುಂತಲಾ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ಬೈಂದೂರು ಕಾಂಗ್ರೆಸ್ ಪ್ರಮುಖರಾದ ಮದನ್ ಕುಮಾರ್, ಎಸ್. ರಾಜು ಪೂಜಾರಿ, ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು, ರಘುರಾಮ್ ಶೆಟ್ಟಿ, ಎಸ್. ಪ್ರಕಾಶ್ವಂದ್ರ ಶೆಟ್ಟಿ, ಉದಯ ಕುಮಾರ್ ಶೆಟ್ಟಿ, ಪ್ರಸ್ನನ್ ಕುಮಾರ್ ಶೆಟ್ಟಿ, ಮೋಹನ್ ಪೂಜಾರಿ, ನರಸಿಂಹ ದೇವಾಡಿಗ, ಶೇಖರ್ ಪೂಜಾರಿ ಸೇರಿದಂತೆ ವಿವಿಧ ಬ್ಲಾಕ್ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Exit mobile version