ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಗಾಂಜಾ ಸೇವನೆ ಮಾಡಿಕೊಂಡು ಅಮಲಿನಲ್ಲಿ ತೂರಾಡಿಕೊಂಡಿದ್ದ ನಾವುಂದ ಗ್ರಾಮದ ಚಾತನಕೆರೆ ನಿವಾಸಿ ಮಹಮ್ಮದ್ ಸಿಯಾಬ್(20)ನನ್ನು ಬೈಂದೂರು ಪಿಎಸ್‌ಐ ಪವನ್ ನಾಯಕ್ ವಶಕ್ಕೆ ತೆಗೆದುಕೊಂಡಿದ್ದಾರೆ.
ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.