Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಬಾಕಿ ಸೀಮೆಎಣ್ಣೆ ಬಿಡುಗಡೆ ಮಾಡವಂತೆ ಮನವಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ:
ನಾಡದೋಣಿ ಮೀನುಗಾರರಿಗೆ ಅಕ್ಟೋಬರ್ ತಿಂಗಳಲ್ಲಿ ಬಾಕಿ ಇರುವ ಸೀಮೆಎಣ್ಣೆಯನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಕೋರಿ ಗಂಗೊಳ್ಳಿಯ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಕಂಚುಗೋಡು, ಉಪಾಧ್ಯಕ್ಷ ಸೂರಜ್ ಖಾರ್ವಿ ಹಾಗೂ ನಿರ್ದೇಶಕ ಚಂದ್ರ ಖಾರ್ವಿ ಅವರು ಕರ್ನಾಟಕ ಸರ್ಕಾರದ ಮೀನುಗಾರಿಕೆ ನಿರ್ದೇಶನಾಲಯಲ್ಲಿ ಮೀನುಗಾರಿಕಾ ನಿರ್ದೇಶಕ ರಾಮಾಚಾರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಕಾಮಗಾರಿಯ ಬಗ್ಗೆ ಚರ್ಚೆ ನಡೆಸಿದ ಅವರು ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಆದಷ್ಟು ಬೇಗ ಅನುಷ್ಠಾನಗೊಳಿಸಬೇಕೆಂದು ನಿರ್ದೇಶಕರಲ್ಲಿ ಮನವಿ ಮಾಡಿದರು.

Exit mobile version