Kundapra.com ಕುಂದಾಪ್ರ ಡಾಟ್ ಕಾಂ

ತ್ರಾಸಿ: ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೪ನೇ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲ್ಲೂಕು ಇದರ ವತಿಯಿಂದ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಸಹಯೋಗದೊಂದಿಗೆ ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ ತ್ರಾಸಿ ಯೋಜನಾ ಕಚೇರಿಯಲ್ಲಿ ನಡೆಯಿತು.

ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಯುರ್ವೇದ ಕಾಲೇಜು ವ್ಯವಸ್ಥಾಪಕ ಡಾ.ನಾಗರಾಜ್ ಪೂಜಾರಿ, ಶಾಸ್ತ್ರೋಕ್ತವಾಗಿ ಮಕ್ಕಳಿಗೆ ‘ಸ್ವರ್ಣಾಮೃತ ಪ್ರಾಶನ’ ಎಂಬ ದಿವ್ಯ ಔಷಧಿಯನ್ನು ಪ್ರತಿ ತಿಂಗಳು ಪು? ನಕ್ಷತ್ರದಂದು ನೀಡಲಾಗುತ್ತಿದೆ. ಹುಟ್ಟಿನಿಂದ 16 ವರ್ಷವರೆಗಿನ ಮಕ್ಕಳಿಗೆ ಪ್ರತಿ ತಿಂಗಳು ಹಾಕಿದಲ್ಲಿ ಅತ್ಯುತ್ತಮ ಪರಿಣಾಮ ಬೀರುತ್ತದೆ. ಕನಿಷ್ಠ 21ಬಾರಿ ಪ್ರತಿ ತಿಂಗಳು ಬಿಡದೆ ಹಾಕಿದಲ್ಲಿ ತುಂಬಾ ಪರಿಣಾಮಕಾರಿ ಎಂದು ಹೇಳಿದರು.

ಮಕ್ಕಳ ತಜ್ಞ ಡಾ. ಪ್ರಥ್ವಿರಾಜ್ ಪುರಾಣಿಕ್, ಕೇಂದ್ರ ಸಮಿತಿ ಒಕ್ಕೂಟ ಅಧ್ಯಕ್ಷ ರಘುರಾಮ್ ಕೆ. ಪೂಜಾರಿ, ಆಸ್ಪತ್ರೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಆಂತರಿಕ ಲೆಕ್ಕಪರಿಶೋಧಕ ರಾಘವೇಂದ್ರ ಸ್ವಾಗತಿಸಿದರು. ತಾಲ್ಲೂಕು ಯೋಜನಾಧಿಕಾರಿ ಶಶಿರೇಖಾ ಪಿ. ಪ್ರಾಸ್ತಾವಿಕ ಮಾತನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version