Kundapra.com ಕುಂದಾಪ್ರ ಡಾಟ್ ಕಾಂ

ಕೋಡಿ ಬ್ಯಾರೀಸ್‍ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ
: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

1949ರ ನವೆಂಬರ್ 26ರಂದು ಅಂಗಿಕಾರಗೊಂಡ ಸಂವಿಧಾನದ ಒಡವೆ, ಸಂವಿಧಾನದ ಕೈದೀಪ ಮತ್ತು ರಾಜಕೀಯ ಜಾತಕ ಎಂದೇ ಕರೆಯಲ್ಪಡುವ ಸಂವಿಧಾನದ ಪೂರ್ವಪೀಠಿಕೆಯಲ್ಲಿ, ಅಡಕವಾಗಿರುವ ‘ಸಾರ್ವಭೌಮ ಸಮಾಜವಾದಿ, ಪ್ರಜಾಸತ್ತಾತ್ಮಕ’ ಪದಗಳನ್ನು ಅತ್ಯಂತ ಸೋದಾಹರಣವಾಗಿ ವಿವರಿಸುವುದರ ಮೂಲಕ ಸರ್ವ ಶೃದ್ಧಾ ಪೂರ್ವಕವಾಗಿ ಸಂವಿಧಾನದ ಆಶೋತ್ತರಗಳಿಗೆ ಬದ್ಧರಾಗಿರುವುದಕ್ಕೆ ಸಂಕಲ್ಪತೊಟ್ಟವರಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್, ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಮತ್ತು ಎಲ್ಲಾ ಅಂಗ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ ವೃಂದ, ಶಿಕ್ಷಕೆತರ ವೃಂದ, ಸಂಸ್ಥೆಗಳ ಎಲ್ಲಾ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು. ಹಿರಿಯ ಶಿಕ್ಷಕರಾದ ಜಯಶೀಲ ಶೆಟ್ಟಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಅರ್ಥಪೂರ್ಣವಾಗಿ ವಿವರಿಸುವುದರೊಂದಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

Exit mobile version