ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.