Kundapra.com ಕುಂದಾಪ್ರ ಡಾಟ್ ಕಾಂ

ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ವಿವಿಧ ಅಭಿವೃದ್ಧಿ ನಿಗಮಗಳಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ವಿಶ್ವಕರ್ಮ ಅಭಿವೃದ್ಧಿ ನಿಗಮ:
ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.kvcdcl.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಸವಿತಾ ಸಮಾಜ ಅಭಿವೃದ್ಧಿ ನಿಗಮ:
ಜಿಲ್ಲಾ ಸವಿತಾ ಸಮಾಜ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ಸವಿತಾ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ವಿವಿಧ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kssd.karnataka.gov.in/ ಅಥವಾ ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ:
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಡಿವಾಳ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kmmd.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ:
ಜಿಲ್ಲಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2022 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.karnataka.gov.in/dbcdc ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ಅಲೆಮಾರಿ ಅಭಿವೃದ್ಧಿ ನಿಗಮ:
ಜಿಲ್ಲಾ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ಅಲೆಮಾರಿ ಜನಾಂಗದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2022 ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://kaad.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪ್ಪಾರ ಅಭಿವೃದ್ಧಿ ನಿಗಮ:
ಜಿಲ್ಲಾ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ, ಉಪ್ಪಾರ ಜನಾಂಗ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://uppardevelopment.karnataka.gov.in/ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://ambigaradevelopment.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ : 0820-2574882 ಅನ್ನು ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version