ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ.84.65 ಕೋಟಿ ವ್ಯವಹಾರ ನಡೆಸಿ, ರೂ 43.13 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 29 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ. ಸಂಘದ ಕಾರ್ಯ ಕ್ಷೇತ್ರದಲ್ಲಿ ಎರಡನೇ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಸಂಘದ ಮಾಜಿ ಅಧ್ಯಕ್ಷರುಗಳಾದ ಹೆಚ್. ನರಸಿಂಹ ಪೂಜಾರಿ, ಬಿ. ಹೂವಯ್ಯ ಪೂಜಾರಿ, ದೊಟ್ಟಯ್ಯ ಪೂಜಾರಿ, ಮಾಜಿ ಕಾರ್ಯದರ್ಶಿ ಗಣೇಶ್ ಎಲ್. ಪೂಜಾರಿ, ಮಾಜಿ ನಿರ್ದೇಶಕರುಗಳಾದ ನಾಗೇಂದ್ರ ಪೂಜಾರಿ ಬೆಲೆಮನೆ, ಮರ್ಲ ಪೂಜಾರಿ ಮಸೂದಿಮನೆ, ಹೆರಿಯ ಪೂಜಾರಿ ಕೆರ್ಗಾಲು, ಹಿರಿಯ ಸದಸ್ಯರಾದ ಚನ್ನು ಪೂಜಾರಿ ಗರಡಿ, ಎಸ್. ರಾಮ ಪೂಜಾರಿ, ಮೋಹನ ಪೂಜಾರಿ ಕೆರ್ಗಾಲು, ಮಾಚ ಪೂಜಾರಿ, ಎಂ ಮುಡೂರ ಪೂಜಾರಿ, ಮುಡೂರ ಪೂಜಾರಿ, ಕುಷ್ಟು ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಉಪಾಧ್ಯಕ್ಷ ತಿಮ್ಮಪ್ಪ ಪೂಜಾರಿ, ನಿರ್ದೇಶಕರಾದ ಹೆಚ್. ನರಸಿಂಹ ಪೂಜಾರಿ, ಬಿ. ನಾರಾಯಣ ಪೂಜಾರಿ, ಮಂಜ ಪೂಜಾರಿ, ರಾಜು ಪೂಜಾರಿ, ಸುರೇಶ ಪೂಜಾರಿ, ಸಂತೋಷ, ಲಕ್ಷ್ಮೀ ಉಪಸ್ಥಿತರಿದ್ದರು.
ಮುಖ್ಯ ಕಾರ್ಯನಿರ್ವಹಣಾಕಾರಿ ಮಹೇಶ್ ಹೆಚ್. ವಾರ್ಷಿಕ ವರದಿ, ಲೆಕ್ಕಪತ್ರ, ಮುಂದಿನ ವರ್ಷದ ಅಂದಾಜು ಆಯವ್ಯಯ ಪತ್ರ ಮಂಡಿಸಿದರು.