Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರು ದೇವಳಕ್ಕೆ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು:
ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ರಾಜ್ಯ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಹಾಗೂ ಆಡಳಿತ ವಿಭಾಗದ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ದೇವಸ್ಥಾನದ ಸ್ಥಿತಿಗತಿಗಳ ಪರಿಶೀಲನೆ ನಡೆಸಿದರು.

ದೇವಾಲಯದ ಪ್ರಧಾನ ಅರ್ಚಕ ಡಾ. ಕೆ. ರಾಮಚಂದ್ರ ಅಡಿಗ, ವ್ಯವಸ್ಥಾಪನಾ ಸಮಿತಿಯ ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ನಾಡ, ಸಂಧ್ಯಾ ರಮೇಶ್, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Exit mobile version