Site icon Kundapra.com ಕುಂದಾಪ್ರ ಡಾಟ್ ಕಾಂ

ಭರತನಾಟ್ಯ ಸ್ಪರ್ಧೆ: ಶ್ರೀ ವೆಂಕಟರಮಣ ಪಿಯು ಕಾಲೇಜು ವಿದ್ಯಾರ್ಥಿನಿ ನಿಯತಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ 2021-22ನೇ ಶೈಕ್ಷಣಿಕ ಸಾಲಿನ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು ವಿಜ್ಞಾನ ವಿಭಾಗದ ನಿಯತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕುಂದಾಪುರದ ಹೂವಯ್ಯ ಖಾರ್ವಿ ಹಾಗೂ ಅಮ್ರತ ದಂಪತಿಗಳ ಪುತ್ರಿ ನಿಯತಿ, ಭರತನಾಟ್ಯ ಗುರುಗಳಾದ ವಿದೂಷಿ ಪ್ರವಿತಾ ಅಶೋಕ್ ಇವರಿಂದ ತರಬೇತಿ ಪಡೆದಿರುತ್ತಾಳೆ. ಕಳೆದ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿನಿ ಕುಮಾರಿ ಸಿಂಚನಾ ನೆಂಪು ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ಪಠ್ಯೇತರ ಚಟುವಟಿಕೆಗಳಲ್ಲಿ ಸಂಸ್ಥೆಯ ಕೀರ್ತಿಯನ್ನು ಬೆಳಗಿಸಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಬೋಧಕ,ಬೋಧಕೇತರ ವ್ರಂದದವರು ಅಭಿನಂದಿಸಿದ್ದಾರೆ.

ಇದನ್ನೂ ಓದಿ:
► ಭಗವದ್ಗೀತಾ ಕಂಠಪಾಠ & ಕನ್ನಡ ಭಾಷಣ ಸ್ಪರ್ಧೆ: ಕುಂದಾಪುರದ ಶ್ರೀ ವೆಂಕಟರಮಣ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಬಹುಮಾನ – https://kundapraa.com/?p=55873 .

Exit mobile version