Kundapra.com ಕುಂದಾಪ್ರ ಡಾಟ್ ಕಾಂ

ಶೌರ್ಯ ವಿಪತ್ತು ನಿರ್ವಹಣ ಸ್ವಯಂ ಸೇವಕರ ತರಬೇತಿ ಕಾರ‍್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ವೇದಿಕೆ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಬಸ್ರೂರಿನ ನಿವೇದಿತ ಪ್ರೌಢಶಾಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣ ಸ್ವಯಂ ಸೇವಕರ ತರಬೇತಿ ಕಾರ್ಯಕ್ರಮ ಜರುಗಿತು.

ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ, ತಾಲೂಕು ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಬಿ.ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಕರಾವಳಿ ಪ್ರಾದೇಶಿಕ ಕಚೇರಿ ನಿರ್ದೇಶಕ ವಸಂತ್ ಸಾಲಿಯಾನ್ ತರಬೇತಿ ಕಾರ‍್ಯಗಾರ ಉದ್ಘಾಟಿಸಿ ಶುಭ ಹಾರೈಸಿದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್, ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಉರಗ ತಜ್ಞ ಮಹೇಶ್ ನಾಯಕ್ ಅಂಕೋಲಾ, ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ ಬಿ, ಮುಖ್ಯ ಶಿಕ್ಷಕ ಸುಬ್ಬಣ್ಣ ಕೋಣಿ, ತಾಲೂಕಿನ ಹಿರಿಯ ಯೋಜನಾಧಿಕಾರಿ ಮುರುಳೀಧರ ಶೆಟ್ಟಿ, ತಾಲೂಕಿನ ಎಲ್ಲಾ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯ ಅಧಿಕಾರಿಗಳು, ಆಂತರಿಕ ಲೆಕ್ಕ ಪರಿಶೋಧಕರು, ವಲಯದ ಸೇವಾ ಪ್ರತಿನಿಧಿಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು.

ಜನ ಜಾಗೃತಿ ವೇದಿಕೆ ಬೆಳ್ತಂಗಡಿ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ ಪಾಯಸ್ ಸಂಪನ್ಮೂಲ ವ್ಯಕ್ತಿಯಾಗಿ ಸ್ವಯಂ ಸೇವಕರಿಗೆ ವಿಪತ್ತಿನ ಸಂದರ್ಭದಲ್ಲಿ ಯಾವ ರೀತಿ ಕಾರ್ಯಚಟುವಟಿಕೆಯನ್ನು ನಡೆಸಬೇಕು ಎನ್ನುವ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು. ಅಗ್ನಿ ಶಾಮಕ ದಳದ ಅಧಿಕಾರಿ ಬಾಬು ಶೆಟ್ಟಿ ಮಾತನಾಡಿ, ಅಗ್ನಿ ದುರಂತ ಸಂದರ್ಭದಲ್ಲಿ ಆಗುವ ಅವಘಡಗಳ ಬಗ್ಗೆ ಮುನ್ನೆಚ್ಚರಿಕೆಯ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಯೋಜನಾಧಿಕಾರಿ ತಿಮ್ಮಯ್ಯ ನಾಯಕ್ ಸ್ವಾಗತಿಸಿದರು. ಕೃಷಿ ಅಧಿಕಾರಿ ಚೇತನ್ ಕುಮಾರ್ ಕಾರ‍್ಯಕ್ರಮ ನಿರೂಪಿಸಿದರು. ಬಸ್ರೂರು ವಲಯದ ಮೇಲ್ವಿಚಾರಕ ಹರೀಶ್ ಖಾರ್ವಿ ತ್ರಾಸಿ ವಂದಿಸಿದರು.

Exit mobile version