ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಕುಂದಾಪುರದ ಚಿಕ್ಕಮ್ಮನಸಾಲ್ ರಸ್ತೆಯ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ವಠಾರದಲ್ಲಿ ಡಿ.18 ರಂದು ನಿರ್ಮಲ ದೇಗುಲ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶ್ರಮದಾನದ ಮಹತ್ವವನ್ನು ತಿಳಿಸಿದರು. ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ನಾಗೇಶ್ ಎಮ್.ಪುತ್ರನ್, ಸುರೇಂದ್ರ ಸಂಗಮ್, ಸಂಗಮ್ ಫ್ರೆಂಡ್ಸ್ನ ಸದಸ್ಯರು, ದೇವಾಲಯ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಅಡಿಗ, ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಭೋಧಕ & ಭೋದಕೇತರರು ಉಪಸ್ಥಿತರಿದ್ದರು.
ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ವಚ್ಚತಾ ಕಾರ್ಯದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದ್ದರು.