Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾಗಿ ಮುನಾಫ್ ಕೋಡಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಮುನಾಫ್ ಕೋಡಿ ಅವರನ್ನು ನೇಮಿಸಲಾಗಿದೆ.

ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಮುನಾಫ್ ಕೋಡಿ ಅವರನ್ನು ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ.

ಮುನಾಫ್ ಕೋಡಿ ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು , ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಿದ್ದರು.

Exit mobile version