ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಹಟ್ಟಿಯಂಗಡಿ ವಲಯದ ದೇವಲ್ಕುಂದ ಕಾರ್ಯಕ್ಷೇತ್ರದ ದೃಷ್ಟಿಗಣಪತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ, ಮತ್ತು ಒಕ್ಕೂಟದ ಮಹಾಸಭೆ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಕಟ್‌ಬೇಲ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ್ ಪುತ್ರನ್ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಯಿಂದ ಮಹಿಳೆಯರು ಸಾಮಾಜಿಕವಾಗಿ, ಆರ್ಥಿಕವಾಗಿ ಬದಲಾವಣೆ ಹೊಂದಿದ್ದಾರೆ. ಶಿಸ್ತು, ಸಮಯಪ್ರಜ್ಞೆ, ಧೈರ್ಯ, ಆತ್ಮವಿಶ್ವಾಸ ಮೂಡಿದೆ ಎಂದರು.
ಧ.ಗ್ರಾ ಯೋಜನೆಯ ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್, ಬಿ ಅವರು, ಜ್ಞಾನವಿಕಾಸ ಕಾರ್ಯಕ್ರಮ ಉದ್ದೇಶ ಆಶಯಗಳ ಮಾಹಿತಿ ನೀಡಿದರು. ಜ್ಞಾನವಿಕಾಸ ಕಾರ್ಯಕ್ರಮ ಬೈಂದೂರು ತಾಲೂಕಿನಲ್ಲಿ ಕೇವಲ 1000 ಮಹಿಳೆಯರಿಗೆ ಅವಕಾಶ ಸಿಕ್ಕಿದೆ. ಈ ಅವಕಾಶವನ್ನು ಸದುಪಯೋಗಗೊಳಿಸಿಕೊಳ್ಳಬೇಕು. ಜೀವನದಲ್ಲಿ ಪ್ರಗತಿ ಸಾಧಿಸಬೇಕು ಎಂದರು.
ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯೆ ಶೋಭಾ ಜಿ ಪುತ್ರನ್, ಗ್ರಾಮ ಪಂಚಾಯಿತಿ ಸದಸ್ಯ ಶರತ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಒಕ್ಕೂಟದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ, ಗೋಪಾಲ, ಒಕ್ಕೂಟದ ಪದಾಧಿಕಾರಿಗಳು. ಸೇವಾಪ್ರತಿನಿಧಿ ಸುಚಿತ್ರ ಉಪಸ್ಥಿತರಿದ್ದರು. ಜ್ಞಾನವಿಕಾಸ ಸಮನ್ವಯಧಿಕಾರಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು. ಒಕ್ಕೂಟದ ಮಾಜಿ ಅಧ್ಯಕ್ಷ ಶಶಿಧರ್ ಶೆಟ್ಟಿ ಸ್ವಾಗತಿಸಿದರು. ಸೇವಾಪ್ರತಿನಿಧಿ ಯಶೋಧ ವರದಿ ಮಂಡಿಸಿದರು. ವಲಯದ ಮೇಲ್ವಿಚಾರಕ ವೆಂಕಟೇಶ್ ವಂದಿಸಿದರು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ವಿವಿಧ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು. ಜ್ಞಾನವಿಕಾಸ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.