ಯುವಜನತೆಗೆ ಸೇನೆಯ ಬಗ್ಗೆ ಅರಿವು ಮಾರ್ಗದರ್ಶನ ಅಗತ್ಯ: ಡಾ. ಗೋವಿಂದ ಬಾಬು ಪೂಜಾರಿ
ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸೇನೆಯ ಬಗ್ಗೆ ಅರಿವು ಮೂಡಿಸುವ ಜೊತೆಗೆ ಅಲ್ಲಿನ ಉದ್ಯೋಗಾವಕಾಶಗಳ ಬಗ್ಗೆ ಯುವಕರಿಗೆ ಮಾರ್ಗದರ್ಶನ ಮಾಡಿ ಅವರನ್ನು ತರಬೇತುಗೊಳಿಸುವುದು ಮತ್ತು ಜಿಲ್ಲೆಯಲ್ಲಿ ಯುವಕರು ಸೇನೆಗೆ ಸೇರಿ ದೇಶಸೇವೆಯಲ್ಲಿ ತೊಡಗಿಕೊಳ್ಳುವಂತೆ ಪ್ರೋತ್ಸಾಹಿಸುವುದು ಅಗತ್ಯವಾಗಿದೆ ಎಂದು ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು.
ನೇಷನ್ಸ್ ಲವರ್ಸ್ ಬೈಂದೂರು ಸಂಸ್ಥೆಯ ಆಶ್ರಯದಲ್ಲಿ ಇಲ್ಲಿನ ರೋಟರಿ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಸೇನಾ ಪಡೆಗಳಲ್ಲಿ ಉದ್ಯೋಗಾವಕಾಶ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಯುವಕರು ದಾರಿ ತಪ್ಪುತ್ತಿದ್ದಾರೆ ಎಂಬ ಸಮಾಜದ ಮಾತಿಗೆ ಅಪವಾದ ಎಂಬಂತೆ ನೇಷನ್ಸ್ ಲವರ್ಸ್ ತಂಡ ಸೇನೆಯ ಬಗ್ಗೆ ನಿರಂತರ ತರಬೇತಿ, ಮಾಹಿತಿ ಹಾಗೂ ಪ್ರೋತ್ಸಾಹ ನೀಡುತ್ತಿದೆ. ಇಂತಹ ಕಾರ್ಯಗಳು ಸಮಾಜದಲ್ಲಿ ಹೆಚ್ಚೆಚ್ಚು ಆಗಲಿ ಎಂದು ಹಾರೈಸಿದರು.
ಇತ್ತಿಚಿಗೆ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಜನರರ್ ಬಿಪಿನ್ ರಾವತ್ ಹಾಗೂ ಇತರ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಬೈಂದೂರು ಪಿಎಸ್ಐ ಪವನ್ ನಾಯಕ್ ಅವರು ಶುಭಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿದ್ದ ನಿವೃತ್ತ ಸೈನಿಕರಾದ ಚಂದ್ರಶೇಖರ ನಾವಡ ಬೈಂದೂರು, ಎಂ. ಜೈಕಿಶನ್ ಭಟ್, ನಿವೃತ್ತ ಸೈನಿಕ ಗಣಪತಿ ಖಾರ್ವಿ ಉಪ್ಪುಂದ ಉಪಸ್ಥಿತರಿದ್ದರು.
ಸೈನಿಕ ಪ್ರಶಾಂತ್ ದೇವಾಡಿಗ ಪ್ರಾಸ್ತಾವಿಕ ಮಾತುಳನ್ನಾಡಿದರು. ಪ್ರಸಾದ್ ಬೈಂದೂರು ಕಾರ್ಯಕ್ರಮ ನಿರೂಪಿಸಿದರು.